- Advertisement -
- Advertisement -


ರಾಮನಗರ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಹೋರಾಟ ತೀವ್ರಗೊಳಿಸಿರುವ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,500ರೂ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾತನಾಡಿದ ಅವರು, ಗೌರವಧನ ಹೆಚ್ಚಳ ಕುರಿತು ಬೆಳಗ್ಗೆಯಷ್ಟೇ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರ ಜೊತೆ ಮಾತನಾಡಿ, ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಲು ಸಲಹೆ ನೀಡಿದ್ದೇನೆ. ದೇಶದಾದ್ಯಂತ ಇರುವ ಕಾರ್ಯಕರ್ತೆಯರಿಗೆ 1,500 ರೂ. ಗೌರವಧನ ಹೆಚ್ಚಳಕ್ಕೆ ಪ್ರಸ್ತಾವ ಸಿದ್ದಪಡಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ಮಂಡಿಸಿ ಗೌರವಧನ ಹೆಚ್ಚಳ ಮಾಡಲಿದೆ. ರಾಜ್ಯ ಸರ್ಕಾರವೂ ಆಶಾ ಕಾರ್ಯಕರ್ತೆಯರ ಗೌರವಯುತ ಬದುಕಿಗೆ ನೀಡುವ ಗೌರವಧನ ಹೆಚ್ಚಳ ಮಾಡಲೇಬೇಕು ಎಂದು ಒತ್ತಾಯಿಸಿದರು.
- Advertisement -








