- Advertisement -
- Advertisement -

ವಿಟ್ಲ: ಹರಿತವಾದ ಆಯುಧದಿಂದ ಚುಚ್ಚಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ನ.24ರಂದು ನಡೆದಿದೆ.ಮೃತರನ್ನು ಚೆನ್ನಯ್ಯ ಪೂಜಾರಿ (45-50) ಎಂದು ಗುರುತಿಸಲಾಗಿದೆ.
ನ.24ರಂದು ಸಂಜೆ ಸುಮಾರು 7 ಗಂಟೆಗೆ ಚೆನ್ನಯ್ಯ ಪೂಜಾರಿ ಅವರು ತಮ್ಮ ಸಹೋದರನ ಮಗಳು ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಹೋದರನ ಮಗಳು ಹೃತಿಕಾ (24) ಹರಿತವಾದ ಸಾಧನದಿಂದ ಚುಚ್ಚಿದ್ದರಿಂದ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ಮೃತಪಟ್ಟಿದ್ದಾರೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತೆ ಹೃತಿಕಾಳನ್ನು ನ.25ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
- Advertisement -








