Friday, November 27, 2026
spot_imgspot_img
spot_imgspot_img

ಕಡಬ: ಕಾರು-ಸ್ಕೂಟರ್ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಕಡಬ: ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.27ರ ಬೆಳಿಗ್ಗೆ ನಡೆದಿದೆ.ಸೋಮವಾರಪೇಟೆ ನಿವಾಸಿ ವಿಶ್ವಾಸ್ (31) ಮೃತಪಟ್ಟವರು.

ವಿಶ್ವಾಸ್ ಅವರು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಕಾರನ್ನು ನಂದನ್ ಎಂಬವರು ಚಲಾಯಿಸುತ್ತಿದ್ದು, ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟ ವಿಶ್ವಾಸ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣ ಅವರನ್ನು ಕಡಬದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!