Saturday, November 28, 2026
spot_imgspot_img
spot_imgspot_img

ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ಪೆರುವಾಯಿ ಇವರ ಆಶ್ರಯದಲ್ಲಿ 11ನೇ ವರ್ಷದ ದೀಪಾವಳಿ ಪ್ರಯುಕ್ತ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

- Advertisement -
- Advertisement -

ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ಪೆರುವಾಯಿ ಇವರ ಆಶ್ರಯದಲ್ಲಿ 11ನೇ ವರ್ಷದ ದೀಪಾವಳಿ ಪ್ರಯುಕ್ತ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ನವೆಂಬರ್ 29, ಆದಿತ್ಯವಾರದಂದು ಪೆರುವಾಯಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ವಠಾರದಲ್ಲಿ ಜರುಗಲಿದೆ.

ಸಂಜೆ ಗಂಟೆ 4.00 ರಿಂದ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಹಾಗೂ ಮಾತೃ ಮಂಡಳಿ ಪೆರುವಾಯಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಸನ್ಮಾನ, ನೃತ್ಯ-ಸಂಗೀತ ಗಾನ ವೈಭವ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇಲಂತಮಜಲು ಮಾಣಿಲ ಅಧ್ಯಕ್ಷರಾದ ಗಣೇಶ್ ಕುಮಾರ್ ದೇಲಂತಮಜಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಕಾಳಿಕಾಂಬ ಅಂಜನೇಯ ದೇವಸ್ಥಾನ (ರಿ)ಕುಕ್ಕಾಜೆ ಮಾಣಿಲ ಧರ್ಮದರ್ಶಿಗಳಾದ ಶ್ರೀ ಕೃಷ್ಣ ಗುರೂಜಿ , ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸಚಿನ್ ಮೆಲ್ಕಾರ್, ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ಲೋಹಿತ್ ಪಣೋಲಿ ಬೈಲ್ , ಶ್ರೀ ರಾಜರಾಜೇಶ್ವರಿ ಮಾತೃ ಮಂಡಳಿ ಪೆರುವಾಯಿ ಅಧ್ಯಕ್ಷರಾದ ಶ್ರೀಮತಿ ಸೂರ್ಯಪ್ರಭಾ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರುವಾಯಿ ಸೇವಾ ಪ್ರತಿನಿಧಿ ಶ್ರೀಮತಿ ಸತ್ಯವತಿ ತಚ್ಚಮ್ಮೆ ಅವರು ಭಾಗವಹಿಸಲಿದ್ದಾರೆ.

ಸನ್ಮಾನಿತರು
ಭಾರತೀಯ ಸೇನೆಯ ನಿವೃತ್ತ ಯೋಧರಾದ ಚಂದ್ರಶೇಖರ ಪೂಜಾರಿ ಕಲ್ಲಡ್ಕ ಪೆರುವಾಯಿ.

ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಕುಮಾರಿ ದೀಕ್ಷಾ ಟಿ. ತಚ್ಚಮ್ಮೆ ಹಾಗೂ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪೆರುವಾಯಿ ಗ್ರಾಮದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಸಭಾ ನಿರೂಪಣೆಯನ್ನು ನಾಗೇಶ್ ಮಾಸ್ಟರ್ ಪೆರುವಾಯಿ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಊರ ಪರವೂರ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!