Saturday, November 28, 2026
spot_imgspot_img
spot_imgspot_img

ಚಿಕ್ಕಮಗಳೂರು: ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನ ದರ್ಪ – ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್‌

- Advertisement -
- Advertisement -

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಮಾಲೀಕನೊಬ್ಬ ಬಂದೂಕು ಹಿಡಿದುಕೊಂಡು ಕಾರ್ಮಿಕರಿಗೆ ಬೆದರಿಸಿ ಹಲ್ಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಾಫಿ ಎಸ್ಟೇಟ್ ಮಾಲಿಕ ಭರತ್ ವಿರುದ್ಧ ಹೊರ ಜಿಲ್ಲೆಯ ವಲಸೆ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕಾರ್ಮಿಕರಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ. ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪ ಸಹ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೋ ವೈರಲ್‌ ಆಗಿದೆ. ಕಾರ್ಮಿಕರ ರಕ್ಷಣೆಗೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾಲೀಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!