- Advertisement -
- Advertisement -


ಉಪ್ಪಿನಂಗಡಿ: ವಳಾಲು ಟೋಲ್ ಗೇಟ್ ಬಳಿ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಪ್ರಸಾರವಾಗುತ್ತಿದ್ದು, ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಅನುಮತಿ ಪಡೆಯದೇ ಸಭೆ ನಡೆಸಿ ಕಾನೂನು ಉಲ್ಲಂಘನೆಯಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಕೂಡಾ ಪ್ರತಿಭಟನೆಯಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುಂಚಿತವಾಗಿ ಕಾರ್ಯಕ್ರಮಕ್ಕೆ ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ವಿನಂತಿಸಿದೆ.
- Advertisement -








