Saturday, November 28, 2026
spot_imgspot_img
spot_imgspot_img

ಮಡಿಯಾಲದಲ್ಲಿ ಉಚಿತ ಉನ್ನತ ಶಿಕ್ಷಣ ಕೇಂದ್ರಕ್ಕೆ ನ.30ರಂದು ಭೂಮಿಪೂಜೆ

- Advertisement -
- Advertisement -

ಪುತ್ತೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟರ್ ವಿಜ್ಞಾನ ಕ್ಷೇತ್ರದಲ್ಲಿ ಉಚಿತ ಪದವಿ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಪುತ್ತೂರು ತಾಲೂಕಿನ ಮಡಿಯಾಲದಲ್ಲಿ ನ.30ರಂದು ಚಾಲನೆ ದೊರೆಯಲಿದೆ.

ಶ್ರೀ ಮಡಿಯಾಲ ನಾರಾಯಣ ಭಟ್ಟರ ಜನ್ಮಶತಾಬ್ದಿ ಸ್ಮರಣಾರ್ಥ ಈ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದರ ಅಂಗವಾಗಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಸಂಶೋಧನೆ ಹಾಗೂ ನಾವೀನ್ಯತಾ ಕೇಂದ್ರ (Centre for Research and Innovation in Artificial Intelligence and Machine Learning) ನಿರ್ಮಾಣಗೊಳ್ಳಲಿದೆ.ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸುವುದರ ಜೊತೆಗೆ ಕೃಷಿ, ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯ ಉದ್ದೇಶವಾಗಿದೆ.ನ.30ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಮಡಿಯಾಲದಲ್ಲಿ ನಡೆಯುವ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್‌ನ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ್ ಸಾಯಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರು ಸಂಸ್ಥೆಯ ಆಶಯ, ಭವಿಷ್ಯದ ಶಿಕ್ಷಣದ ದೃಷ್ಟಿಕೋನ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಸಬಲೀಕರಣ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮವು ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ.

- Advertisement -

Related news

error: Content is protected !!