Sunday, November 29, 2026
spot_imgspot_img
spot_imgspot_img

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ತಂದೆಗೆ ಕೊಲೆ ಯತ್ನ: ಇಬ್ಬರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಶಿವಮೊಗ್ಗ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತಗೆ ಲೈಂಗಿಕ ಕಿರುಕುಳ, ಆಕೆಯ ತಂದೆಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ.27 ವರ್ಷದ ಮೊದಲನೇ ವ್ಯಕ್ತಿಯು ಪ್ರೀತಿಸುವುದಾಗಿ ನಂಬಿಸಿ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಅದನ್ನು ವಿರೋಧಿಸಿದ ಬಾಲಕಿ ತಂದೆಗೆ ಸ್ನೇಹಿತನ ಜತೆ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದ.

ಈ ಬಗ್ಗೆ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸ್ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.ಪಿಎಸ್‌ಐ ವಿ.ಶಿವಪ್ರಸಾದ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ.ಪಾಟೀಲ್‌ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 1ನೇ ಆಪಾದಿತನಿಗೆ 4 ವರ್ಷ ಕಠಿಣ ಕಾರಾಗೃಹವಾಸ, 1.21 ಲಕ್ಷ ರೂ. ದಂಡ ಮತ್ತು 2ನೇ ಆಪಾದಿತನಿಗೆ 3 ವರ್ಷ ಕಠಿಣ ಕಾರಾಗೃಹವಾಸ ಮತ್ತು 41 ಸಾವಿರ ರೂ. ದಂಡ ವಿಧಿಸಿದ್ದಾರೆ.

ಅದರಲ್ಲಿ ನೊಂದ ಬಾಲಕಿಗೆ 1 ಲಕ್ಷ ರೂ. ಹಾಗೂ ಸರಕಾರದಿಂದ 10 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕ ಶ್ರೀಧ‌ರ್ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!