Sunday, November 29, 2026
spot_imgspot_img
spot_imgspot_img

ಕಡಬ | ಆಟೋ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

- Advertisement -
- Advertisement -

ಕಡಬ: ಆಟೋ ಚಾಲಕರೊಬ್ಬರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಕಡಬ ತಾಲೂಕಿನ ಬಂಟ್ರ ಗ್ರಾಮದಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನ.27ರಂದು ನಡೆದಿದೆ.

ಕಡಬ ಐತ್ತೂರು ನಿವಾಸಿ ವಸಂತ ಗೌಡ (52) ಹಲ್ಲೆಗೊಳಗಾದವರು. ಇವರು ಆಟೋರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದು, ನ.27ರಂದು ಮಧ್ಯಾಹ್ನ ಬಂಟ್ರ ಗ್ರಾಮದ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ತೆರಳಿದ್ದ ವೇಳೆ ಪರಿಚಯದ ಗಣೇಶ್ ಎಂಬಾತ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ವಸಂತ ಗೌಡ ಅವರು ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!