Friday, July 31, 2026
spot_imgspot_img
spot_imgspot_img

ಕ್ರಷರ್ ನಲ್ಲಿ ಭಾರೀ ಸ್ಫೋಟ

- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್​ನಲ್ಲಿ ಗುರುವಾರ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲದ 8 ಕಾರ್ವಿುಕರು ಮೃತಪಟ್ಟಿದ್ದಾರೆ.ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.


ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಎಷ್ಟು ಜನ ಇದ್ದರು ಎಂಬುದು ಗೊತ್ತಾಗಿಲ್ಲ. ಮೃತ ದೇಹಗಳು ಅಲ್ಲಲ್ಲಿ ಛಿದ್ರಗೊಂಡು ಬಿದ್ದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಸ್ಪೋಟದಿಂದಲೇ ದುರಂತ ಸಂಭವಿಸಿರುವುದು ದೃಢಪಟ್ಟಿದೆ. ಆದರೆ ಸ್ಪೋಟಕ್ಕೆ ಏನು ಕಾರಣ ಎಂಬುದು ಗೊತ್ತಾಗಿಲ್ಲ.

ಲಾರಿಯಲ್ಲಿ ಸ್ಪೋಟಕಗಳನ್ನು ತರಲಾಗಿದ್ದು, ಈ ಲಾರಿಯೇ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಸ್ಪೋಟದಿಂದಾಗಿ ಕೆಟ್ಟ ವಾಸನೆ ಉಂಟಾಗಿದ್ದು ಘಟನಾ ಸ್ಥಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ.

- Advertisement -

Related news

error: Content is protected !!