Monday, April 29, 2024
spot_imgspot_img
spot_imgspot_img

ಹಿರಿಯ ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರು ನಿಧನ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರು (60) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶುಕ್ರವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡ ಕಾರಣ ಕೂಡಲೇ ಅವರನ್ನು ಕಣಚೂರು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿರುವ ಉಮ್ಮರ್ ಪಜೀರು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಮ್ಮರ್ ಪಜೀರು ನಿಧನಕ್ಕೆ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!