Thursday, July 30, 2026
spot_imgspot_img
spot_imgspot_img

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣ- ಆರೋಪಿ ಯುವರಾಜ್ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ!

- Advertisement -
- Advertisement -

ಬೆಂಗಳೂರು: ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಆರೋಪಿ ಯುವರಾಜ್ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ 67ನೇ ಸಿಸಿಹೆಚ್ ಕೋರ್ಟ್ ಈ ಆದೇಶ ನೀಡಿದೆ. ಇದರಿಂದಾಗಿ ವಂಚಕ ಯುವರಾಜ್ ಒಡೆತನದ 80-90 ಕೋಟಿ ಮೌಲ್ಯದ ಆಸ್ತಿ ಜಪ್ತಿಯಾಗಲಿದೆ.

ಈ ಕುರಿತು ವಿಚಾರಣೆ ನಡೆಸಿದ ಬೆಂಗಳೂರಿನ 67ನೇ ಸಿಸಿಹೆಚ್ ಕೋರ್ಟ್, ಯುವರಾಜ್ ಪತ್ನಿಯ ಹೆಸರಿನಲ್ಲಿರುವ 80 ರಿಂದ 90 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಯುವರಾಜ್ ಗೂ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನಟಿ ರಾಧಿಕಾ ಕುಮಾರ ಸ್ವಾಮಿ ಸೇರಿದಂತೆ ಹಲವರನ್ನು ಯುವರಾಜ್ ಜತೆಗಿನ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗುರಿಪಡಿಸಲಾಗಿತ್ತು.

- Advertisement -

Related news

error: Content is protected !!