Friday, July 31, 2026
spot_imgspot_img
spot_imgspot_img

ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗೆ ಸರ್ಕಾರದ ಚಿಂತನೆ!

- Advertisement -
- Advertisement -

ಚಾಮರಾಜನಗರ: ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿರುವ ಬೆನ್ನಲ್ಲೇ ರಾಜ್ಯ ಸರಕಾರ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಿದೆ.

1 ರಿಂದ 9 ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತಂತೆ ಒತ್ತಡಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜ.27 ರಂದು ಆರೋಗ್ಯ ಸಚಿವ ಡಾ.ಡಿ.ಸುಧಾಕರ್ ರವರೊಂದಿಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತೀರ್ಮಾನಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.

ಈಗಾಗಲೇ ನಡೆಯುತ್ತಿರುವ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಅರ್ಧ ದಿನದ ಬದಲಿಗೆ ಪೂರ್ತಿ ದಿನ ನಡೆಸಬೇಕೆಂಬ ಬೇಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಅಲ್ಲದೇ 1 ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಬೇಡಿಕೆ ಇದ್ದು, ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಂಡು ಶಾಲಾರಂಭದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

- Advertisement -

Related news

error: Content is protected !!