- Advertisement -
- Advertisement -
ಉಳ್ಳಾಲ: ಇಲ್ಲಿನ ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆ ಬಂದಿದ್ದ ವ್ಯಕ್ತಿಯೊಬ್ಬ ತಪಾಸಣೆ ನಡೆಸುತ್ತಿದ್ದ ಸ್ಟಾಫ್ ನರ್ಸ್ ಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಕೆ.ಸಿ. ರೋಡ್ ಕಾಟುಂಗುರ ಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್ (27) ಬಂಧಿತ ಆರೋಪಿ. ಇಂದು ಬೆಳಗ್ಗೆ ಕೋಟೆಕಾರಿನ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದ ಆರೋಪಿ ಅಲ್ಲಿ ತಪಾಸಣೆ ನಡೆಸುತ್ತಿದ್ದ ನರ್ಸ್ ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಕೂಡಲೇ ಆಸ್ಪತ್ರೆ ಸಿಬ್ಬಂದಿ ಉಳ್ಳಾಲ ಪೊಲೀಸರ ಗಮನಕ್ಕೆ ತಂದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


- Advertisement -








