- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪಮುಖ್ಯಮಂತ್ರಿಗಳಾಗಿರುವ ಸನ್ಮಾನ್ಯ ಲಕ್ಷ್ಮಣ್ ಸವದಿಯವರನ್ನು ಶನಿವಾರ ಭಾಜಪಾ ಜಿಲ್ಲಾ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಪಕ್ಷದ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದಿರೆ, ಶಾಸಕರಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.




- Advertisement -