Tuesday, June 23, 2026
spot_imgspot_img
spot_imgspot_img

ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಟ – ಆರೋಪಿಯ ಬಂಧನ 30 ಲಕ್ಷ ರೂ. ಮೌಲ್ಯ ದ ಚಿನ್ನ ವಶ!

- Advertisement -
- Advertisement -

ಮಂಗಳೂರು: ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಶ್ಕೂರ್ ಕಲ್ಲರ್ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು ತಪಾಸಣೆ ವೇಳೆ ದೇಹದಲ್ಲಿ ಚಿನ್ನದ ಅಂಶ ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳಾಗಿಸಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

ಮಶ್ಕೂರ್ ಬಳಿ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದು ಆತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!