Monday, September 28, 2026
spot_imgspot_img
spot_imgspot_img

ಕದ್ರಿ ಉದ್ಯಾನವನದಲ್ಲಿ ಪುಟಾಣಿ ಮಕ್ಕಳ ಬಾಲಮಂಗಳ ಎಕ್ಸ್‌ಪ್ರೆಸ್ ರೈಲಿಗೆ ಶಾಸಕ ವೇದವ್ಯಾಸ್ ಕಾಮತ್ ರಿಂದ ಚಾಲನೆ

- Advertisement -
- Advertisement -

ಮಂಗಳೂರು: ಕದ್ರಿ ಉದ್ಯಾನವನದಲ್ಲಿ ಪುಟಾಣಿ ಮಕ್ಕಳಿಗಾಗಿ ಬಾಲಮಂಗಳ ಎಕ್ಸ್‌ಪ್ರೆಸ್ ರೈಲಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಕೋವಿಡ್ 19 ಕಾರಣದಿಂದ ನಿಂತಿದ್ದ ಪುಟಾಣಿ ರೈಲು ಇಂದಿನಿಂದ ಪುನಃ ಕಾರ್ಯ ನಿರ್ವಹಿಸಲಿದೆ.

ಚಾಲನೆ ನೀಡುವ‌ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಉಪ ಮೇಯರ್ ವೇದಾವತಿ, ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ ಎಂ, ಪಾಲಿಕೆ ಮುಖ್ಯಸಚೇತಕರಾದ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಳಯ ಕಾರ್ಪೋರೇಟರ್ ಶಕಿಲಾ ಕಾವಾ, ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ ಚಂದ್ರ ಶೆಟ್ಟಿ, ರಾಧಾಕೃಷ್ಣ, ರಮೇಶ್ ಕಂಡೆಟ್ಟು, ಬಿಜೆಪಿ ಮುಖಂಡರಾದ ರಾಜ್ ಗೋಪಾಲ್ ರೈ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!