Sunday, August 30, 2026
spot_imgspot_img
spot_imgspot_img

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ನೂತನ ರಾಜ್ಯ ಸಂಚಾಲಕರಾಗಿ ಮುಸ್ತಫಾ ಅಬ್ದುಲ್ಲಾ ಉಳ್ಳಾಲ ಆಯ್ಕೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ನೂತನ ರಾಜ್ಯ ಸಂಚಾಲಕರಾಗಿ ಸಮಾಜ ಸೇವಕ ಮುಸ್ತಫಾ ಅಬ್ದುಲ್ಲಾ ಉಳ್ಳಾಲ ರವರು ಆಯ್ಕೆಯಾಗಿದ್ದಾರೆ.

ಈ ಆಯ್ಕೆ ಪ್ರಕ್ರಿಯೆಯನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ವೈ ಸಯೀದ್ ಅಹ್ಮದ್ ರವರ ಶಿಫಾರಸಿನ ಮೇಲೆ ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನದೀಂ ಜಾವೆದ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅನುಮೋದಿಸಿರುತ್ತಾರೆ.

ಮುಸ್ತಫಾ ಅಬ್ದುಲ್ಲರು ತನಗೆ ಅವಕಾಶ ಮಾಡಿ‌ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕ ಯುಟಿ ಖಾದರ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ‌ಅಹ್ಮದ್, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹಾಗೂ ರಾಜ್ಯಾದ್ಯಂತ ವಿವಿಧ ಯೋಜನೆಗಳೊಂದಿಗೆ ಪಕ್ಷ ಸಂಘಟಿಸಲು ಶಕ್ತಿ ಮೀರಿ ಶ್ರಮಿಸುವೆನು ಎಂದಿದ್ದಾರೆ.

- Advertisement -

Related news

error: Content is protected !!