Sunday, August 30, 2026
spot_imgspot_img
spot_imgspot_img

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

- Advertisement -
- Advertisement -

ಬೆಂಗಳೂರು : ವಿಧಾನ ಪರಿಷತ್ ಸಭಾಪತಿಯಾಗಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರತಾಪ್ ಚಂದ್ರ ಶೆಟ್ಟಿ ಅವರ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಸವರಾಜ್ ಹೊರಟ್ಟಿ ಅವರು ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಕಾಂಗ್ರೆಸ್ ಪಕ್ಷದಿಂದ ಸಭಾಪತಿ ಸ್ಥಾನಕ್ಕೆ ನಜೀರ್ ಅಹಮದ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ನಜೀರ್ ಅಹಮದ್ ಅವರು ತಮ್ಮ ನಾಮಪತ್ರವನ್ನು ವಾಪಾಸ್ ಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!