Monday, June 30, 2025
spot_imgspot_img
spot_imgspot_img

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜಯಪ್ರಕಾಶ್ ನಾಯಕ್ ಎನ್., ಉಪಾಧ್ಯಕ್ಷರಾಗಿ ಚಂದ್ರಾವತಿ ಆಯ್ಕೆ

- Advertisement -
- Advertisement -

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜಯಪ್ರಕಾಶ್ ನಾಯಕ್ ಎನ್., ಉಪಾಧ್ಯಕ್ಷರಾಗಿ ಚಂದ್ರಾವತಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 12 ಸ್ಥಾನವನ್ನು ಹೊಂದಿರುವ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಒಂಬತ್ತು ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಾಗು ಮೂರು ಮಂದಿ ಎಸ್.ಡಿ.ಪಿ. ಐ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮಹಿಳೆ ಮೀಸಲಾತಿ ಘೋಷಣೆಯಾಗಿತ್ತು.

ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖಾ ಅಧಿಕಾರಿ ಸುಧಾ ಜೋಶಿ ಚುನಾವಣಾಧಿಕಾರಿಯಾಗಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಹೊರಪೇಟೆರವರು ಸಹಕರಿಸಿದರು.ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿರುವ ನಿಟ್ಟಿನಲ್ಲಿ ಅವಿರೋಧ ಆಯ್ಕೆ ನಡೆದಿದೆ.

- Advertisement -

Related news

error: Content is protected !!