Thursday, September 3, 2026
spot_imgspot_img
spot_imgspot_img

ಮಂಗಳೂರು: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನ ಬಂಧನ

- Advertisement -
- Advertisement -

ಮಂಗಳೂರು: ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನೇ ಗುರಿಯಾಗಿರಿಸಿ ಬೆಲೆಬಾಳುವ ಕೊಕೇನ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಓರ್ವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜು-ಕೆಎಂಸಿ ಬಳಿ ಕೊಕೇನ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ಬೋಳಾರದ ಸುಪ್ರೀತ್‌(35) ಎಂಬವನನ್ನು ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಎರಡು ಲಕ್ಷ ರೂ.ಗೂ ಅಧಿಕ ಮೊತ್ತದ ಕೊಕೇನ್ ಮಾದಕ ದ್ರವ್ಯ ಹಾಗೂ ಕೃತ್ಯಕ್ಕೆ ಬಳಸಿರುವ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಈ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!