Wednesday, July 2, 2025
spot_imgspot_img
spot_imgspot_img

ಗೋಧ್ರಾ ಹತ್ಯಾಕಾಂಡ: 19 ವರ್ಷಗಳ ಬಳಿಕ ಪ್ರಮುಖ ಆರೋಪಿ ರಫೀಕ್ ಬಂಧನ!

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ.

ಪ್ರಮುಖ ಆರೋಪಿ ರಫೀಕ್ ಹುಸೇನ್ ಭಾತುಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೋಧ್ರಾ ನಗರದವನಾದ ರಫೀಕ್, ರೈಲಿಗೆ ಬೆಂಕಿ ಹಚ್ಚುವ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿನ ಮನೆಯೊಂದರಲ್ಲಿ ರಫೀಕ್ ನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಪೂರೈಕೆ ಮಾಡಿದ್ದ ರಫೀಕ್, ಗಲಭೆಗೂ ಪ್ರಚೋದನೆ ನೀಡಿದ್ದ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!