Thursday, June 4, 2026
spot_imgspot_img
spot_imgspot_img

ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್!

- Advertisement -
- Advertisement -

ಬೆಂಗಳೂರು : ನಗರದಲ್ಲಿ ದಿನೇದಿನೆ ಹೆಚ್ಚುತ್ತಿರುವ ಭಿಕ್ಷುಕರ ಉಪಟಳಕ್ಕೆ ಕಡಿವಾಣ ಹಾಕಲು ಪೊಲೀಸರು ತೀರ್ಮಾನಿಸಿದ್ದಾರೆ. ಟ್ರಾಫಿಕ್ ಸಿಗ್ನಲ್ ನಲ್ಲಿ ಭಿಕ್ಷೆ ಬೇಡುವವರು ಕಂಡು ಬಂದರೆ ಬಂಧಿಸುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರಿಗೆ ಭಿಕ್ಷುಕರು ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸುಗಮ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂಬ ದೂರಿನ ಮೇರೆಗೆ ಈ ಸೂಚನೆ ನೀಡಲಾಗಿದೆ.

ಎಲ್ಲ ಡಿಸಿಪಿಗಳಿಗೆ ಈ ಸಂಬಂಧ ಪೊಲೀಸ್ ಆಯುಕ್ತ ಕಮಲ್ ಪಂತ್ ನಿರ್ದೇಶನ ನೀಡಿದ್ದಾರೆ. ಟ್ರಾಫಿಕ್ ಸಿಗ್ನಲ್ ಗಳಲ್ಲಿ ಯಾವುದೇ ರೀತಿಯ ಭಿಕ್ಷಾಟನೆಗೆ ಅವಕಾಶ ನೀಡದಂತೆ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಕಾನೂನು ಮತ್ತು ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!