Tuesday, September 8, 2026
spot_imgspot_img
spot_imgspot_img

ಆನ್ಲೈನ್ ಮೂಲಕ ಮದ್ಯ ಮಾರಾಟ : ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಬೆಂಗಳೂರು: ಆನ್ಲೈನ್’ನಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡದೆ ಸರ್ಕಾರದ ಕ್ರಮ ಪ್ರಶ್ನಿಸಿ ನಗರದ ಮದ್ಯದಂಗಡಿಯೊಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಮಾಡಿದೆ. ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾ. ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಅಬಕಾರಿ ಕಾಯ್ದೆ ನಿಯಮಗಳ ಪ್ರಕಾರ ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಹೀಗಾಗಿ ಬಾರ್ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮೇಲ್ಮನವಿ ವಜಾ ಮಾಡಿ ಆದೇಶಿಸಿದೆ.

- Advertisement -

Related news

error: Content is protected !!