Sunday, June 7, 2026
spot_imgspot_img
spot_imgspot_img

ಖ್ಯಾತ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ !

- Advertisement -
- Advertisement -

ಅಮೆರಿಕ: ಅಮೆರಿಕದ ಖ್ಯಾತ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಲಾಸ್ ಏಂಜಲೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟೈಗರ್ ವುಡ್ಸ್ ಅವರ ಕಾಲು, ತಲೆಗೆ ಗಂಭೀರ ಗಾಯಗಳಾಗಿದ್ದು, ಆಪರೇಷನ್ ಮಾಡಲಾಗಿದೆ. ಮಾರ್ಗಮಧ್ಯೆ ಟೈಗರ್ ವುಡ್ಸ್ ಅವರ ಕಾರು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಟೈಗರ್ ವುಡ್ಸ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಟೈಗರ್ ವುಡ್ಸ್ ಅವರನ್ನು ಕೂಡಲೇ ಹೊರಗೆಳೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!