Saturday, July 5, 2025
spot_imgspot_img
spot_imgspot_img

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣ ಮತ್ತು ಹಣ ವರ್ಗಾವಣೆ ಪ್ರಕರಣ- ಆರೋಪಿ ವಜ್ರ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಕೋರ್ಟ್ ಆದೇಶ!

- Advertisement -
- Advertisement -

ಲಂಡನ್: 14 ಸಾವಿರ ಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ವಜ್ರ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದ್ದು, ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ಇಂಗ್ಲೆಂಡ್ ನ್ಯಾಯಾಲಯ ಹೇಳಿದೆ.

ಈ ಹಿನ್ನಲೆಯಲ್ಲಿ ವಿಚಾರಣೆಗೆ ನಿಲ್ಲಲು ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಇಂಗ್ಲೆಂಡ್ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನೀರವ್​ ಮೋದಿ ಪರ ವಾದವನ್ನು ತಿರಸ್ಕರಿಸಿದ ಯುಕೆ ಕೋರ್ಟ್​, ವಂಚನೆ ಪ್ರಕರಣವೊಂದಕ್ಕೆ ಭಾರತದಲ್ಲಿ ನೀರವ್​ ಉತ್ತರಿಸಬೇಕಿದೆ ಎಂದು ಜಡ್ಜ್​​ ಅಭಿಪ್ರಾಯಪಟ್ಟಿದ್ದಾರೆ.

- Advertisement -

Related news

error: Content is protected !!