Tuesday, September 1, 2026
spot_imgspot_img
spot_imgspot_img

ತಮ್ಮನ ಆತ್ಮಹತ್ಯೆ ಸುದ್ದಿ ಕೇಳಿ ನೇಣಿಗೆ ಕೊರಳೊಡ್ಡಿದ ಅಣ್ಣ !

- Advertisement -
- Advertisement -

ಮೈಸೂರು: ತಮ್ಮನ ಆತ್ಮಹತ್ಯೆ ಸುದ್ದಿ ಕೇಳಿ ಅಣ್ಣ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಮನಕಲಕುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದೆ.

ವೆಂಕಟೇಶ್(28) ಮತ್ತು ಹರೀಶ್(26) ಮೃತ ಸೋದರರು. ರೈತನಾಗಿದ್ದ ಹರೀಶ್ ಟ್ರ್ಯಾಕ್ಟರ್ ಚಾಲಕ ಸಹ ಆಗಿದ್ದನು. ಹರೀಶ್ ಟ್ರ್ಯಾಕ್ಟರ್ ವೇಗವಾಗಿ ಚಲಾಯಿಸುತ್ತಿದ್ದರಿಂದ ತಂದೆ ಚಿನ್ಮಯಿಗೌಡ ಬುದ್ಧಿ ಹೇಳಿದ್ದರು. ಇತ್ತ ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಹರೀಶ್ ತಮ್ಮನಿಗೆ ಕರೆ ಮಾಡಿ ನಿಧಾನವಾಗಿ ಟ್ರ್ಯಾಕ್ಟರ್ ಚಲಾಯಿಸುವಂತೆ ತಿಳಿ ಹೇಳಿದ್ದರು.

ಆತ್ಮೀಯ ಅಣ್ಣ ತನಗೆ ಬೈದನೆಂದು ನೊಂದ ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ತಮ್ಮ ಸಾವಿನ ಸುದ್ದಿ ತಿಳಿದ ವೆಂಕಟೇಶ್ ಮಾನಸಿಕವಾಗಿ ಕುಸಿದಿದ್ದರು. ಈ ವೇಳೆ ಮೊಬೈಲ್ ಗೆ ತಮ್ಮನ ಸಾವಿನ ಫೋಟೋಗಳು ಬಂದಿವೆ.

ಫೋಟೋ ನೋಡಿ ಮತ್ತಷ್ಟು ಆಘಾತಕ್ಕೊಳಾದ ವೆಂಕಟೇಶ್, ನನ್ನಿಂದಲೇ ತಮ್ಮನ ಸಾವು ಆಯ್ತು ಎಂದು ನೊಂದು ಊರಿಗೆ ಬರುವ ಬದಲು ಸರಗೂರು ರಸ್ತೆ ಕಡೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಕ್ಕ-ಪಕ್ಕದಲ್ಲಿ ಸೋದರರ ಅಂತ್ಯಕ್ರಿಯೆ ಮಾಡಲಾಗಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!