Monday, September 21, 2026
spot_imgspot_img
spot_imgspot_img

ನೆಲ್ಯಾಡಿ : ಕಾಡಾನೆ ದಾಳಿ ಲಾರಿ ಚಾಲಕ ಮೃತ್ಯು!

- Advertisement -
- Advertisement -

ನೆಲ್ಯಾಡಿ : ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮೃತ ಲಾರಿ ಚಾಲಕನನ್ನು ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅದರ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!