Saturday, November 21, 2026
spot_imgspot_img
spot_imgspot_img

ಇಂದು ಸಂಜೆ ” ಬಿಗ್ ಬಾಸ್ ಸೀಸನ್ 8″ ಕ್ಕೆ ಅದ್ಧೂರಿ ಚಾಲನೆ

- Advertisement -
- Advertisement -

ಬೆಂಗಳೂರು: ಕನ್ನಡ ಬಿಗ್​ ಬಾಸ್​ ಸೀಸನ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎನ್ನುವ ಸುದ್ದಿ ಹೊರ ಬಿದ್ದಿದ್ದೇ ತಡ, ಪ್ರೇಕ್ಷಕರು ಮನೆ ಒಳಗೆ ಯಾರು ಹೋಗಲಿದ್ದಾರೆ? ಈ ಬಾರಿ ಮನೆ ಸೇರುವ ಸ್ಪರ್ಧಿಗಳೆಷ್ಟು? ಸುದೀಪ್​ ಯಾವ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದರು. ಈ ಎಲ್ಲಾ ಪ್ರಶ್ನೆ ಹಾಗೂ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಸಂಜೆ 6 ಗಂಟೆಗೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಸೀಸನ್​ 8’ ಅದ್ಧೂರಿಯಾಗಿ​ ಪ್ರಾರಂಭಗೊಳ್ಳಲಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ನಟ ಸುದೀಪ್​ ಬಿಗ್​ ಬಾಸ್​ ನಡೆಸಿಕೊಡಲಿದ್ದಾರೆ. ಪ್ರತಿ ಅಭ್ಯರ್ಥಿಯನ್ನು ವೇದಿಕೆಯ ಮೇಲೆ ಕರೆದು ಅವರ ಪರಿಚಯ ನೀಡಿ, ಮನೆ ಒಳಗೆ​ ಕಳುಹಿಸುವ ಕೆಲಸವನ್ನು ಸುದೀಪ್​ ಮಾಡಲಿದ್ದಾರೆ.

ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಬಿಗ್​ ಬಾಸ್​ ಕಾರ್ಯಕ್ರಮ ನಡೆಯಲಿದೆ. ಕಂಟೆಸ್ಟೆಂಟ್​ಗಳು ವೇದಿಕೆ ಏರುವುದರ ಜತೆಗೆ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುವ ಸಾಧ್ಯತೆ ಇದೆ. ಈ ಬಾರಿಯು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ.

- Advertisement -

Related news

error: Content is protected !!