Monday, October 19, 2026
spot_imgspot_img
spot_imgspot_img

ಮಂಗಳೂರು: ವಸತಿಗೃಹದಲ್ಲಿ ವೇಶ್ಯಾವಾಟಿಕೆ ದಂಧೆ- ಇಬ್ಬರ ಬಂಧನ!

- Advertisement -
- Advertisement -

ಮಂಗಳೂರು: ಸುರತ್ಕಲ್ ಬಳಿಯ ಬಾಳ ಗ್ರಾಮದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಹಳೆಯಂಗಡಿಯ ತೋಕುರು ನಿವಾಸಿ ತೋಕೂರು ಹರೀಶ್ ಹಾಗೂ ಬಂಟ್ವಾಳದ ದಡ್ಡಲ್ ಕಾಡ್, ಮೂಡ ನಡಗೋಡು ಗ್ರಾಮದ ನಿವಾಸಿ ಲೋಕನಾಥ್ ಫೂಜಾರಿ ಎಂದು ಗುರುತಿಸಲಾಗಿದೆ.

ಆರೋಪಿಗಳು ಬಾಳ ಗ್ರಾಮದ ಬಿ ಎ ಎಸ್ ಎಫ್ ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೆಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು. ಇದೇ ವೇಳೆ ಬೆಂಗಳೂರು ಉತ್ತರಹಳ್ಳಿಯ ನಿವಾಸಿ ಸಂತ್ರಸ್ತೆ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!