Wednesday, September 23, 2026
spot_imgspot_img
spot_imgspot_img

ಮಂಗಳೂರು ಕಾಲೇಜಿನಲ್ಲಿ ಮತ್ತೊಂದು ರ‍್ಯಾಗಿಂಗ್ ಪ್ರಕರಣ : ನಾಲ್ವರು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಮಂಗಳೂರು: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ‍್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ‍್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ‍್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ರ‍್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ‍್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕೆ ಆಗಿದೆ ?, ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ. ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ ನಡೆದಿತ್ತು. ‌ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದರೂ, ವಿದ್ಯಾರ್ಥಿಗಳು ಗಮನ ಕೊಟ್ಟಿಲ್ಲ.

- Advertisement -

Related news

error: Content is protected !!