Sunday, July 26, 2026
spot_imgspot_img
spot_imgspot_img

ವಿವಾದದ ನಡುವೆಯೇ ಇಂದು ರಮೇಶ್ ಜಾರಕಿಹೊಳಿ ಸುದ್ದಿಗೋಷ್ಟಿ

- Advertisement -
- Advertisement -

ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ, ಇದರ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಟಿ ಕರೆದಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ಕರೆಯಲಾಗಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಟಿ ಇದಾಗಿದೆ. ರಮೇಶ್ ಜಾರಕಿಹೊಳಿ ಅವರು ಕರೆದಿರುವ ಸುದ್ಧಿಗೋಷ್ಠಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಟಿ ಕರೆದಿದ್ದಾರೆ.

- Advertisement -

Related news

error: Content is protected !!