- Advertisement -
- Advertisement -
ಬೆಂಗಳೂರು : ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ. ನಿಯಮ ಮೀರಿ ಕೆಲವೆಡೆ ಶಾಲೆ ಆರಂಭಿಸಿದ ಬಗ್ಗೆ ದೂರುಗಳು ಬಂದಿದ್ದು, ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ನಿಯಮ ಮೀರಿ ಶಾಲೆ ಆರಂಭಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಲಾಗಿದೆ. ರಾಜ್ಯದಲ್ಲಿ 6 ನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ ತರಗತಿ ನಡೆದಿವೆ. 1 -5 ನೇ ತರಗತಿ ಇನ್ನೂ ಆರಂಭಿಸಿಲ್ಲ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿತ್ತು. ಆದರೆ, ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಸದ್ಯಕ್ಕೆ 1 -5 ನೇ ತರಗತಿ ಆರಂಭಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
- Advertisement -