Monday, September 21, 2026
spot_imgspot_img
spot_imgspot_img

ಮುದ್ರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;

- Advertisement -
- Advertisement -

ಹೆಬ್ರಿ, ಮಾ.16: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮಂಗಳವಾರ ಮುಂಜಾನೆ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಕಾರ್ಯಕ್ರಮ ಮುಗಿಸಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಮನೆಗೆ ವಾಪಾಸುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಅವರು ಕಾರಿನಿಂದ ಕೆಳಗಿದು ಬಚಾವಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಕಾರಿನ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!