Wednesday, September 2, 2026
spot_imgspot_img
spot_imgspot_img

ಕರ್ನಾಟಕದ ಎರಡು ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ದಿನಾಂಕ ನಿಗದಿ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ, ಬಿ ನಾರಾಯಣ್ ರಾವ್ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ವಿಧಾನಸಭೆ ಹಾಗೂ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ತೆರವಾಗಿರುವ ಮಸ್ಕಿ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ.

ಮಾರ್ಚ್ 23ರಂದು ಅಧಿಸೂಚನೆ ಹೊರಡಿಸಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎಪ್ರಿಲ್ 17ರಂದು ಚುನಾವಣೆ ನಡೆದು ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.

- Advertisement -

Related news

error: Content is protected !!