Saturday, August 1, 2026
spot_imgspot_img
spot_imgspot_img

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಸಾವನ್ನಪ್ಪಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಅವರ ಮೃತ ದೇಹ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಡಿ ಕ್ಷೇತ್ರದ ಸಂಸದರಾಗಿದ್ದ 62 ವರ್ಷದ ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ, ಶರ್ಮಾ ಸಾವನ್ನಪ್ಪಿದ ಬೆನ್ನಲ್ಲೇ ಬಿಜೆಪಿಯ ಸಂಸದೀಯ ಸಭೆಯನ್ನು ರದ್ದುಪಡಿಸಲಾಗಿದೆ.

ರಾಮ್ ಸ್ವರೂಪ್ ಶರ್ಮಾ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ಧಾರೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯವರಾದ ಶರ್ಮಾ ಅವರು ಮಂಡಿ ಲೋಕಸಭಾ ಕ್ಷೇತ್ರದಿಂದ 2014 ಮತ್ತು 2019ರಲ್ಲಿ ಎರಡು ಬಾರಿ ಬಿಜೆಪಿ ಟಿಕೆಟ್​ನಿಂದ ಸ್ಪರ್ಧಿಸಿ ಗೆದ್ದಿದ್ದರು.

ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿಯೂ ಅವರು ಜವಾಬ್ದಾರಿ ನಿಭಾಯಿಸಿದ್ದಾರೆ.

- Advertisement -

Related news

error: Content is protected !!