- Advertisement -
- Advertisement -
ಹಾಸನ: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನಿಗೆ ಯುವತಿ ಸಾರ್ವಜನಿಕವಾಗಿ ಧರ್ಮದೇಟು ನೀಡಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೇಲೂರಿನಲ್ಲಿ ಬಸ್ ಹತ್ತಿದ್ದ ಯುವಕ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದ ಎಂದು ಆರೋಪಿಸಲಾಗಿದೆ. ಹಾಸನ ಬಸ್ ನಿಲ್ದಾಣ ಬರುತ್ತಿದ್ದಂತೆ ಯುವತಿ ವ್ಯಕ್ತಿಯ ಕುತ್ತಿಗೆ ಪಟ್ಟಿ ಹಿಡಿದು ಕೆನ್ನೆಗೆ ಬಾರಿಸಿದ್ದಾಳೆ. ಬಳಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -