Monday, October 19, 2026
spot_imgspot_img
spot_imgspot_img

ಉಡುಪಿ: ನವ ವಿವಾಹಿತ, ಪೆಟ್ರೋಲ್ ಪಂಪ್ ಮಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಪೆಟ್ರೋಲ್ ಪಂಪ್ ಮಾಲಕ, ನವವಿವಾಹಿತರೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಮಠದಬೆಟ್ಟು ಎಂಬಲ್ಲಿ ಇಂದು ನಡೆದಿದೆ.

ಉತ್ತಮ್ ನಾಯಕ್ (30) ಆತ್ಮಹತ್ಯೆ ಮಾಡಿಕೊಂಡವರು. 4 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಇವರು ಮಠದ ಬೆಟ್ಟುವಿನಲ್ಲಿರುವ ಫ್ಲಾಟ್‍ವೊಂದರ 3ನೇ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ತಂದೆ ಮತ್ತು ತಮ್ಮ ಇದ್ದು, ಪತ್ನಿ ಮುಂಬೈನಲ್ಲಿದ್ದರು ಎಂದು ತಿಳಿದು ಬಂದಿದೆ.

ಇವರು ಇಂದು ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರ ಮೃತದೇಹವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಸಹಕರಿಸಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!