Wednesday, June 24, 2026
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ; ಮದುವೆ ಮನೆಯಲ್ಲಿ ಕೃತ್ಯ ಎಸೆಗಿದ ಹಮೀದ್ ಯಾನೆ ಮೌಲ ಅಮ್ಮಿ

- Advertisement -
- Advertisement -

ವಿಟ್ಲ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪುತ್ತೂರು ರಸ್ತೆಯ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಮೆಹೆಂದಿ ಕಾರ್ಯಕ್ರಮದ ದಿನ ಆಗಮಿಸಿದ್ದ.

ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿನ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಬಾಲಕ ಮನೆಯಲ್ಲಿ ತಿಳಿಸಿದ್ದು, ಬಳಿಕ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ಅಮ್ಮಿ ವಿರುದ್ಧ ದೂರು ನೀಡಿದ್ದಾರೆ.

driving
- Advertisement -

Related news

error: Content is protected !!