Wednesday, July 22, 2026
spot_imgspot_img
spot_imgspot_img

ಕೊರೊನಾ ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ 6 ರಿಂದ 9ನೇ ತರಗತಿಗಳು ಸ್ಥಗಿತ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮುಂದಿನ‌ ಆದೇಶ ನೀಡುವವರೆಗೆ 6ರಿಂದ 9ನೇ ತರಗತಿಗಳನ್ನು ಭೌತಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

10ನೇ ತರಗತಿಗಳು ಎಂದಿನಂತೆ ಮುಂದುವರಿಯಲಿವೆ. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಉಳಿದೆಡೆ ಸದ್ಯ ಈಗ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ. ಈ ನೂತನ ಆದೇಶ ಸದ್ಯ ಕೇವಲ ಬೆಂಗಳೂರು ನಗರ ವ್ಯಾಪ್ತಿಗೆ ಮಾತ್ರ ಒಳಪಡಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರು ಹೇಳಿದ್ದಾರೆ.

- Advertisement -

Related news

error: Content is protected !!