Thursday, June 25, 2026
spot_imgspot_img
spot_imgspot_img

ಐಪಿಎಲ್ 2021: ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ- ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಎಬಿ ಡಿವಿಲಿಯರ್ಸ್

- Advertisement -
- Advertisement -

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಶುಕ್ರವಾರ ಆರಂಭವಾದ 14ನೇ ಆವೃತ್ತಿಯ ಐಪಿಎಲ್ ನ ಮೊದಲ ಪಂದ್ಯದಲ್ಲಿ 2 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಎಬಿ ಡಿವಿಲಿಯರ್ಸ್ (48), ಗ್ಲೆನ್ ಮ್ಯಾಕ್ಸ್ ವೆಲ್ (39) ಹಾಗೂ ನಾಯಕ ವಿರಾಟ್ ಕೊಹ್ಲಿ(33) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗೆಲುವಿನ ನಗೆ ಬೀರಿದೆ.

ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ಆರ್ ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಗೆಲ್ಲಲು 160 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಮುಂಬೈ ಪರ ಜಸ್ ಪ್ರೀತ್ ಬುಮ್ರಾ ಹಾಗೂ ಮಾರ್ಕೊ ಜಾನ್ಸನ್ ತಲಾ 2 ವಿಕೆಟ್ ಪಡೆದರು.

ಮೊದಲಿಗೆ ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ವೇಗದ ಬೌಲರ್ ಹರ್ಷಲ್ ಪಟೇಲ್ 5 ವಿಕೆಟ್ ಉತ್ತಮ ಬೌಲಿಂಗ್ ದಾಳಿಯ ಹೊರತಾಗಿಯೂ ಆರಂಭಿಕ ಆಟಗಾರ ಕ್ರಿಸ್ ಲಿನ್(49) ಎಸೆತ, 4 ಸೂರ್ಯಕುಮಾರ್ ಯಾದವ್(31) ಹಾಗೂ ಇಶಾನ್ ಕಿಶನ್(28) ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತ್ತು.

- Advertisement -

Related news

error: Content is protected !!