Tuesday, July 28, 2026
spot_imgspot_img
spot_imgspot_img

ಕಾಶಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ಕೋರ್ಟ್‌ ಆದೇಶ: ಮಸೀದಿ ವಿರುದ್ಧ ಕಾನೂನು ಹೋರಾಟಕ್ಕೆ ನಿಂತವರಿಗೆ ಜೀವ ಬೆದರಿಕೆ!

- Advertisement -
- Advertisement -

ವಾರಾಣಸಿ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಮಂದಿರಕ್ಕೆ ಅಂಟಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ಸ್ಥಳೀಯ ಕೋರ್ಟ್‌ ಆದೇಶಿಸಿದ ಬೆನ್ನಲ್ಲೇ, ಕಾಶಿಯಲ್ಲಿರುವ ಮಸೀದಿ ವಿರುದ್ಧ ಕಾನೂನು ಹೋರಾಟಕ್ಕೆ ಧುಮುಕಿದ ಅರ್ಜಿದಾರ ಹರಿಹರ ಪಾಂಡೆ ರವರಿಗೆ ಜೀವ ಬೆದರಿಕೆಯ ಕರೆಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಕಲ್ಪಿಸಲಾಗಿದೆ. ಜೊತೆಗೆ ಈ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿಹರ ಪಾಂಡೆಯವರು, ಜ್ಞಾನವಾಪಿ ಮಸೀದಿ ಸಮೀಕ್ಷೆ ನಡೆಸುವಂತೆ ಪುರಾತತ್ವ ಸರ್ವೇಕ್ಷಣ ಇಲಾಖೆಗೆ ನ್ಯಾಯಾಲಯ ಸೂಚನೆ ನೀಡಿದ ಬಳಿಕ ನಾನು ಮನೆಗೆ ತಲುಪುತ್ತಿದ್ದಂತೆಯೇ ಯಾಸಿನ್‌ ಎಂಬ ವ್ಯಕ್ತಿ ಕರೆ ಮಾಡಿದ್ದ.

ಪಾಂಡೆ ನೀವು ಕೇಸ್‌ ಅನ್ನು ಗೆದ್ದಿದ್ದೀರಿ. ಆದರೆ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಮೀಕ್ಷೆ ನಡೆಸಲು ಬಿಡಲ್ಲ. ನೀವು ಮತ್ತು ನಿಮ್ಮ ಸಹೋದ್ಯೋಗಿಗಳನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದ’ ಎಂದು ಹೇಳಿದ್ದಾರೆ.

- Advertisement -

Related news

error: Content is protected !!