Wednesday, September 2, 2026
spot_imgspot_img
spot_imgspot_img

ಮಂಡ್ಯ: ಪ್ರೇಮ ಪ್ರಕರಣದ ವಿಚಾರಕ್ಕೆ 17ವರ್ಷದ ಬಾಲಕನ ಭೀಕರ ಹತ್ಯೆ!

- Advertisement -
- Advertisement -

ಮಂಡ್ಯ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಬಾಲಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

driving

ಕಲ್ಲಹಳ್ಳಿಯ 17 ವರ್ಷದ ಬಾಲಕ ಅದೇ ಬಡಾವಣೆಯ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಹುಡುಗಿ ಮನೆಯವರು ನಿನ್ನೆ ರಾತ್ರಿ ಬಾಲಕನನ್ನು ಮನೆಗೆ ಕರೆದುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಬಾಲಕನನ್ನು ಮುಂಜಾನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಬಾಲಕ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ಯುವತಿಯ ತಂದೆ ಶಿವಲಿಂಗು ವಿರುದ್ಧ ಮೃತ ಬಾಲಕನ ಮನೆಯವರು ಗಂಭೀರ ಆರೋಪ ಮಾಡಿದ್ದು, ಹಲ್ಲೆ ನಡೆಸಿದ ಶಿವಲಿಂಗುವನ್ನು ಬಂಧಿಸಲು ಬಾಲಕಿ ಮನೆ ಎದುರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಕಲ್ಲಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿತ್ತು. ಶವದೊಂದಿಗೆ ಪಶ್ಚಿಮ ಪೊಲೀಸ್ ಠಾಣೆ ಎದುರು ಶವ ಇಟ್ಟು ಧರಣಿ ನಡೆಸಲು ಮೃತ ಬಾಲಕನ ಮನೆಯವರು ನಿರ್ಧಾರಿಸಿದ್ದಾರೆ. ಘಟನೆ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ayo
- Advertisement -

Related news

error: Content is protected !!