Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ಮರುಪೂರಣ ಮತ್ತು ಮಾರಾಟ- ಓರ್ವ ಆರೋಪಿಯನ್ನು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

- Advertisement -
- Advertisement -

ಬಂಟ್ವಾಳ: ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ಗ್ಯಾಸ್ ಏಜೆನ್ಸಿಯೊಂದರ ಡೆಲಿವರಿ ಸಿಬಂದಿಯೋರ್ವ ಡೆಲಿವೆರಿ ಮಾಡಬೇಕಿದ್ದ ಗ್ಯಾಸ್ ಸಿಲಿಂಡರ್ ನಿಂದ ಅಡುಗೆ ಅನಿಲವನ್ನು ಖಾಲಿ ಸಿಲಿಂಡರಿಗೆ ತುಂಬಿಸಿ ಮಾರಾಟ ಮಾಡುತ್ತಿದ್ದದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಪೋಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಕೃತ್ಯ ನಡೆಸುತ್ತಿದ್ದ ಆರೋಪಿ ಉತ್ತರ ಭಾರತ ಮೂಲದ ಕಾರ್ಮಿಕ ಜಯಪ್ರಕಾಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

ಖಾಲಿ ಸಿಲಿಂಡರಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುವ ಕುರಿತು ಅನುಮಾನಗೊಂಡ ಗ್ರಾಮಸ್ಥರು ಕಾದು ಕುಳಿತು ಪತ್ತೆ ಹಚ್ಚಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!