Wednesday, September 2, 2026
spot_imgspot_img
spot_imgspot_img

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು, ಟಿಪ್ಪು ಜಯಂತಿ ಮತ್ತೆ ಆರಂಭ: ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸುಡು ಬಿಸಿಲಿನಲ್ಲೂ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ ಬಿ ನಾರಾಯಣ ರಾವ್ ಪರ ಶನಿವಾರದಂದು ಪ್ರಚಾರ ಕಾರ್ಯ ನಡೆಸಿದ್ದಾರೆ.

ಅಲ್ಪಸಂಖ್ಯಾತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲಾಗುವುದು ಹಾಗೂ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!