- Advertisement -
- Advertisement -
ಚೆನ್ನೈ: ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 13 ನೇ ಮ್ಯಾಚ್ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಮುಂಬೈ ಇಂಡಿಯನ್ಸ್ ತಂಡ 137 ರನ್ ಗಳಿಸಿತ್ತು. ಇದರ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.1 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 138 ರನ್ ಗಳಿಸುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ 45, ಸ್ಟೀವನ್ ಸ್ಮಿತ್ 33, ಲಲಿತ್ ಯಾದವ್ 22, ಪೃಥ್ವಿ ಶಾ 7, ರಿಶಬ್ ಪಂತ್ 7 ಹಾಗೂ ಶಿಮ್ರೊನ್ ಹೆಟ್ಮೆಯರ್ 14 ರನ್ ಗಳಿಸಿದರು.
- Advertisement -