Tuesday, April 30, 2024
spot_imgspot_img
spot_imgspot_img

ಸಿ.ಎಂ.ಯಡಿಯೂರಪ್ಪ ಗುಣಮುಖ; ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -G L Acharya panikkar
- Advertisement -

ಬೆಂಗಳೂರು: ಕೋವಿಡ್-19 ಪಾಸಿಟಿವ್ ಆಗಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಡಿಸ್ಚಾರ್ಜ್ ಆದರು. ಎ.16ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಬೆಳಗಾವಿ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಎ.16ರಂದು ರಾಮಯ್ಯ ಆಸ್ಪತ್ರೆಗೆ ಚೆಕಪ್ ಗೆ ಹೋಗಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್ ವೈ ಅಧಿಕಾರಿಗಳ ಸಭೆ ನಡೆಸುತ್ತಿದ್ದರು.

ಸಿಎಂ ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಢವಾಗಿತ್ತು. ಕಳೆದ ವರ್ಷವೂ ಸೋಂಕು ದೃಢವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಯಡಿಯೂರಪ್ಪ ಮಾರ್ಚ್ 12 ಕ್ಕೆ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದರು.

- Advertisement -

Related news

error: Content is protected !!