- Advertisement -
- Advertisement -
ಉಡುಪಿ: ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಣಿಪಾಲದ ಆಶ್ಲೇಷ್ ಹೋಟೆಲ್ ನಲ್ಲಿ ನಡೆದಿದೆ.
ಗುರುವಾರ ಸಂಜೆಯ ವೇಳೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿ ಕೊಂಡಿದ್ದು, ಗೋಡಾನ್ ಒಳಗೆ ಸಂಗ್ರಹಿಸಿಟ್ಟಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಹೋಟೆಲ್ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಚರಣೆಯಿಂದಾಗಿ ಭಾರೀ ದುರಂತವೊಂದು ತಪ್ಪಿದಂತಾಗಿದೆ.
- Advertisement -