Friday, June 26, 2026
spot_imgspot_img
spot_imgspot_img

ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ!

- Advertisement -
- Advertisement -

ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಗಾಲೇರು ನಗರಿನ ಪ್ರಾಜೆಕ್ಟ್ ಸಂಬಂಧ ತಂದೆಯೊಂದಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಕರು ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳಿಂದ ತನ್ನ ತಂದೆಯೊಂದಿಗೆ ಕೂಲಿ ಕೆಲಸಕ್ಕೆಂದು ಬರುತ್ತಿದ್ದ ಆಂಧ್ರ ಪ್ರದೇಶದ ನಾರಾಯಣ ಪೇಟೆಯ ಯುವತಿ ಮೇಲೆ ಕಾಮುಕರು ಕಣ್ಣಿಟ್ಟಿದ್ದರು ಎಂದು ಹೇಳಲಾಗುತ್ತಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದಾರೆ.

ಇನ್ನು, ಕರ್ನೂಲ್ ನ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಓರ್ವನ ಮೇಲೆ ಮೃತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕರ್ನೂಲ್ ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!