Thursday, July 30, 2026
spot_imgspot_img
spot_imgspot_img

ನಟಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್!

- Advertisement -
- Advertisement -

ಹೈದರಾಬಾದ್: ದೇಶದ ಜನರನ್ನು ಪೆಡಂಭೂತದಂತೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಚಿತ್ರರಂಗದ ತಾರೆಯರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ.

ಚಿತ್ರರಂಗದ ಹಲವು ತಾರೆಯರಲ್ಲಿ ಈಗಾಗಲೇ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೆಲವರು ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದರೆ, ಮತ್ತೆ ಕೆಲವರೂ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಟಿ ಪೂಜಾ ಹೆಗ್ಡೆ ಅವರಿಗೂ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಭಾನುವಾರ ತನಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿರುವ ಪೂಜಾ, ಎಲ್ಲರಿಗೂ ನಮಸ್ಕಾರ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಆಮೀರ್ ಖಾನ್ ಅವರಿಗೂ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ.

- Advertisement -

Related news

error: Content is protected !!